ರಾಯಚೂರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ
ರಾಯಚೂರು, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಚಿದ ಭಜಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ನಗರದ ನೂತನ ಜಿಲ್ಲಾಧಿಕಾರಿಗಳ
ರಾಯಚೂರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ


ರಾಯಚೂರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ


ರಾಯಚೂರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ


ರಾಯಚೂರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ


ರಾಯಚೂರು, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಚಿದ ಭಜಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕನ್ನಡ ರಾಜ್ಯೋತ್ಸವ ಅಂಗವಾಗಿ ನವಂಬರ್ 1ರ ಬೆಳಿಗ್ಗೆ 7.30ಕ್ಕೆ ನಗರದ ಕರ್ನಾಟಕ ಸಂಘದ ಆವರಣದಿಂದ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿದ ನಂತರ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬೆಳಿಗ್ಗೆ 9ಕ್ಕೆ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯ ಹಾಜರಿರಬೇಕು ಎಂದರು.

ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಪಡೆ, ಗೃಹರಕ್ಷಕ ದಳ, ಭಾರತ ಸೇವಾದಳ ಹಾಗೂ ವಿವಿಧ ಶಾಲೆ ಹಾಗೂ ಕಾಲೇಜ್ ಗಳಿಂದ ಶಿಸ್ತು ಬದ್ಧವಾಗಿ ಪಥ ಸಂಚಲನ ನಡೆಯಲಿದೆ. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮವಹಿಸಬೇಕು. ಶಿಷ್ಟಾಚಾರದ ಅನ್ವಯ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಸಂಘ–ಸ0ಸ್ಥೆಯವರು ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯೋತ್ಸವ ಎಡೆದೊರೆ ಪ್ರಶಸ್ತಿ: ಕರ್ನಾಟಕ ರಾಜ್ಯೋತ್ಸವ -2025ರ ಅಂಗವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಾದ ಸಾಹಿತ್ಯ, ಪತ್ರಿಕೋದ್ಯಮ, ವೈದ್ಯಕೀಯ, ಸಂಸ್ಥೆ, ಕೃಷಿ ಹಾಗೂ ಆಶ್ರಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ವಿವಿಧ ಗಣ್ಯರಿಗೆ ಅಂದು ರಾಜ್ಯೋತ್ಸವ ಎಡೆದೊರೆ ಪುರಸ್ಸಾರ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತದೆ. ಈ ಆಯ್ಕೆಯು ಪಾರದರ್ಶಕವಾಗಿ ನಡೆಸಲು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರೇಶ ನಾಯಕ, ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ.ಶಾಂತಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಆರ್.ಗುರುನಾಥ, ಕನ್ನಡ ಪರ ಸಂಘಟನೆಗಳ ಮುಖಂಡರಾದ ಬಸವರಾಜ ಕಳಸ, ವಿನೋದ ರೆಡ್ಡಿ, ಅಲ್ತಾಫ್, ಕೆ.ಶ್ರೀನಿವಾಸ, ಮಾರುತಿ ಬಡಿಗೇರ, ಅಣ್ಣಪ್ಪ ಮೇಟಿಗೌಡ, ಎಂ.ಬಸವರಾಜ, ಶಿವಕುಮಾರ್ ಯಾದವ್, ವನಿತಾ ಆರ್., ಚಂದ್ರಶೇಖರ ನಾಗಡದಿನ್ನಿ ಸೇರಿದಂತೆ ವಿವಿಧ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande