ಬಿಎಸ್‌ಎನ್‌ಎಲ್ : “ದೀಪಾವಳಿ ಬೊನಾಂಸಾ”
ಬಳ್ಳಾರಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಬಳ್ಳಾರಿಯ ಸಾರ್ವಜನಿಕ ದೂರ ಸಂಪರ್ಕ ಸೇವಾ ಸಂಸ್ಥೆ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಅ.15 ರಿಂದ ನ.15 ರವರೆಗೆ ಒಂದು ತಿಂಗಳ ಸೀಮಿತ ಅವಧಿಗೆ ಮಾತ್ರ “ದೀಪಾವಳಿ ಬೊನಾಂಸಾ” ಮೂಲಕ ಗ್ರಾಹಕರು ರೂ.1/- ಗೆ 4ಜಿ ಸೇವೆ ಪಡೆ
ಬಿಎಸ್‌ಎನ್‌ಎಲ್ : “ದೀಪಾವಳಿ ಬೊನಾಂಸಾ”


ಬಳ್ಳಾರಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಬಳ್ಳಾರಿಯ ಸಾರ್ವಜನಿಕ ದೂರ ಸಂಪರ್ಕ ಸೇವಾ ಸಂಸ್ಥೆ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಅ.15 ರಿಂದ ನ.15 ರವರೆಗೆ ಒಂದು ತಿಂಗಳ ಸೀಮಿತ ಅವಧಿಗೆ ಮಾತ್ರ “ದೀಪಾವಳಿ ಬೊನಾಂಸಾ” ಮೂಲಕ ಗ್ರಾಹಕರು ರೂ.1/- ಗೆ 4ಜಿ ಸೇವೆ ಪಡೆಯಬಹುದು ಎಂದು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಬಳ್ಳಾರಿಯ ಉಪಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

ಈ ಪ್ಲಾನ್ ನಲ್ಲಿ ಅನಿಯಮಿತ ಧ್ವನಿ ಕರೆಗಳು, ದಿನಕ್ಕೆ 2ಜಿಬಿ ಡೇಟಾ ಮತ್ತು 100 ಎಸ್‌ಎಂಎಸ್, ಉಚಿತ ಸಿಮ್ ಪಡೆಯಬಹುದು (30 ದಿನಗಳಿಗೆ ಮಾತ್ರ).

ಈ ಸೌಲಭ್ಯವನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲಾ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande