ದೀಪಾವಳಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು : ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಬಳ್ಳಾರಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ದೀಪಾವಳಿ ಹಬ್ಬವು ಪರಿಸರ ಸ್ನೇಹಿಯಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಂಭ್ರಮದಿ0ದ ಆಚರಣೆಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ. ಅವರು ಶುಕ್ರವಾರ ಜಿಲ್ಲಾ
ದೀಪಾವಳಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ದೀಪಾವಳಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ದೀಪಾವಳಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ಬಳ್ಳಾರಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ದೀಪಾವಳಿ ಹಬ್ಬವು ಪರಿಸರ ಸ್ನೇಹಿಯಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಂಭ್ರಮದಿ0ದ ಆಚರಣೆಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯ ಕೆ-ಸ್ವಾನ್ ವಿಸಿ ಹಾಲ್‌ನಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಕರೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ಸಾರ್ವಜನಿಕರು ತಿರುಗಾಡುವ ರಸ್ತೆಗಳಲ್ಲಿ ಜನರು ಎಲ್ಲೆಂದರಲ್ಲಿ ಪಟಾಕಿಗಳನ್ನು ಸಿಡಿಸಿ ಸಂಚಾರಕ್ಕೆ ತೊಂದರೆ ಮಾಡುವುದು ಹಾಗೂ ಶಬ್ದ ಮಾಲಿನ್ಯ ಮತ್ತು ಆಸ್ಪತ್ರೆ, ಶಾಲೆ ಸೇರಿದಂತೆ ಇತರೆ ಸ್ಥಳಗಳಲ್ಲಿ ಜನರು ಪಟಾಕಿಗಳನ್ನು ಸಿಡಿಸದಂತೆ ನೋಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತ ಈ ಹಬ್ಬವನ್ನು ಆಚರಣೆ ಮಾಡೋಣ ಎಂದರು.

ಜನರು ಪರಿಸರ ಸ್ನೇಹಿ ಹಸಿರು ಪಟಾಕಿ ಜೊತೆಗೆ ಮಣ್ಣಿನ ಹಣತೆಯ ದೀಪಗಳಿಂದ ಈ ದೀಪಾವಳಿ ಆಚರಿಸಬೇಕು. ಇದರಿಂದ ಗ್ರಾಮೀಣ ಭಾಗದಲ್ಲಿ ತಯಾರಿಸುವ ಹಣತೆಯಿಂದ ಗ್ರಾಮೀಣ ಪ್ರದೇಶಕ್ಕೆ ಆದಾಯವಾಗುವುದರ ಜೊತೆಗೆ ಯಾವುದೇ ಪರಿಸರ ಮಾಲಿನ್ಯವೂ ಆಗುವುದಿಲ್ಲ. ಹಸಿರು ಪಟಾಕಿಗಳನ್ನು ಬಳಸುವಾಗ ಚಿಕ್ಕ ಮಕ್ಕಳು, ವೃದ್ಧರು, ಪ್ರಾಣಿ, ಪಕ್ಷಿಗಳಿಗೆ ತೊಂದರೆಗಳಾಗದ0ತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದರು.

ಆಸ್ಪತ್ರೆ, ಶಾಲಾ-ಕಾಲೇಜುಗಳು ಸೇರಿದಂತೆ ಇತರೆ ನಿಷೇಧಿತ ಪ್ರದೇಶಗಳಲ್ಲಿ ಪಟಾಕಿಗಳನ್ನು ಬಳಸುವಂತಿಲ್ಲ. ನಮ್ಮ ಹಿಂದಿನ ಸಂಪ್ರದಾಯದAತೆ ಮಣ್ಣಿನ ಹಣತೆಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಈ ಹಬ್ಬವನ್ನು ಆಚರಣೆ ಮಾಡುತ್ತಾ ಬರಲಾಗುತ್ತಿದ್ದು, ಅದರಂತೆ ಈ ವರ್ಷ ಮಣ್ಣಿನ ಹಣತೆಯ ದೀಪಗಳನ್ನು ಬೆಳಗಿಸುವ ಮೂಲಕ ಸ್ಥಳೀಯ ಹಣತೆ ತಯಾರಕರಿಗೆ ಉತ್ತೇಜನ ನೀಡುವುದರ ಜೊತೆಗೆ ಈ ದೀಪಾವಳಿಯನ್ನು ಎಲ್ಲರೂ ಸಂಭ್ರಮ ಮತ್ತು ಸಡಗರದಿಂದ ಜಿಲ್ಲೆಯಲ್ಲಿ ಆಚರಿಸೋಣವೆಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ನಾಗಮಣಿ ಹೊಸಮನಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗೆ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande