ವಿಜಯಪುರ, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕನ್ನಡ ರಾಜ್ಯೋತ್ಸವದ ಆಚರಣೆ ಹಬ್ಬದ ವಾತಾವರಣದ ರೀತಿಯಲ್ಲಿ, ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಆಯಾ ಇಲಾಖೆ ಅಧಿಕಾರಿಗಳು ಈ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಿ,ಕನ್ನಡಮಯ ಹಬ್ಬದ ವಾತಾವರಣ ಇರುವಂತೆ ಅಗತ್ಯ ಯೋಜನೆ ರೂಪಿಸುವಂತೆಯೂ, ಕನ್ನಡದ ಶ್ರೀಮಂತ ಪರಂಪರೆ ಕಲೆ ಹಾಗೂ ಸಂಸ್ಕೃತಿ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಮ್ಮಿಳಿತಗೊಳಿಸಬೇಕು. ಶ್ರೀಮಂತ ಸಂಸ್ಕೃತಿಯ ಪರಿಚಯ ಮಾಡಿಕೊಡುವ ಕಲಾ ಪ್ರಕಾರಗಳನ್ನು ಆಯೋಜಿಸಲು ಯೋಜನೆ ರೂಪಿಸಿಕೊಳ್ಳುವಂತೆಯೂ, ರಾಜ್ಯೋತ್ಸವ ಕಾರ್ಯಕ್ರಮದ ಮೂಲಕ ನಾಡಿನ ಕಲೆ,ಸಂಸ್ಕೃತಿ, ಇತಿಹಾಸ, ಸಾಹಿತ್ಯದ ಹಿರಿಮೆ-ಗರಿಮೆ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು. ಈ ನಿಟ್ಟಿನಲ್ಲಿ ಸಾಂಸ್ಕೃತಿಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.
ಕಾರ್ಯಕ್ರಮವು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಿಗ್ಗೆ 9ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಲಿದೆ. ಕಾರ್ಯಕ್ರಮಕ್ಕೆ ಸಬಂಧಿಸಿದ0ತೆ ಅಧಿಕಾರಿಗಳಿಗೆ ವಹಿಸಿದ್ದ ಎಲ್ಲ ಕೆಲಸ ಕಾರ್ಯಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು.
ಅಂದು ಬೆಳಿಗ್ಗೆ 7.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭುವನೇಶ್ವರ ದೇವಿಯ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ವಿವಿಧ ಇಲಾಖೆಗಳು ನಿರ್ಮಿಸಿರುವ ಸ್ಥಬ್ಧಚಿತ್ರಗಳು, ಕಲಾ ತಂಡದೊ0ದಿಗೆ ನಗರದ ವೃತ್ತಗಳ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವುದು. ವೇದಿಕೆ ಸಿದ್ಧತೆ, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸುವುದು. ಆಹ್ವಾನ ಪತ್ರಿಕೆಯ ಮುದ್ರಣ ಹಾಗೂ ವಿತರಣೆ, ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾರ್ಯ ಕೈಗೊಳ್ಳಲು ನಿರ್ದೇಶಿಸಿದರು.
ನಗರದ ಎಲ್ಲಾ ಮುಖ್ಯ ವೃತ್ತಗಳ ಸ್ವಚ್ಛತೆ ಹಾಗೂ ವಿದ್ಯುತ್ ದೀಪಾಲಂಕಾರ ಕೈಗೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವುದು, ಇನ್ನೀತರ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈಗಾಗಲೇ ಸಮಿತಿ ರಚಿಸಿದ್ದು, ವಿವಿಧ ಸಮಿತಿ ಅಧಿಕಾರಿಗಳು ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ವೈದ್ಯಕೀಯ ವ್ಯವಸ್ಥೆ ಹಾಗೂ ವೈದ್ಯಕೀಯ ತಂಡದೊAದಿಗೆ ಆಂಬ್ಯುಲೆನ್ಸ್, ಅಗ್ನಿ ನಿರೋಧಕ ವಾಹನದ ವ್ಯವಸ್ಥೆ ಮಾಡಿಕೊಳ್ಳಬೇಕು. ಪೊಲೀಸ್ ಪಡೆ, ಹೊಂಗಾರ್ಡ್ಸ್, ಸೈನಿಕ ಶಾಲೆಯ ವಿದ್ಯಾರ್ಥಿಗಳು, ಎನ್‌ಸಿಸಿ ವಿದ್ಯಾರ್ಥಿಗಳು, ಅಗ್ನಿ ಶಾಮಕ ದಳ, ಅರಣ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಒಳಗೊಂಡ0ತೆ ತಂಡಗಳು ಕವಾಯತಿನಲ್ಲಿ ಪಾಲ್ಗೊಂಡು ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡುವಂತೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ಸಂಜೆ ಕನ್ನಡ ನಾಡು ನುಡಿ ಹಾಗೂ ನಾಡಿನ ವೈವಿಧ್ಯತೆ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆಯೂ, ಭಾಗವಹಿಸುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಪ್ರಮಾಣ ವಿತರಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಿಕಿ, ಹೆಸ್ಕಾಂ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ್ ಸೌದಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ವೀರಯ್ಯ ಸಾಲಿಮಠ, ಸಾರಿಗೆ ಇಲಾಖೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ ಮುದ್ದೇಬಿಹಾಳ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಎಂ.ಸಿ.ಮುಲ್ಲಾ, ಅಡಿವೆಪ್ಪ ಸಾಲಗಲ್, ಫಯಾಜ್ ಕಲಾದಗಿ, ರಾವಜಿ, ದೇವೆಂದ್ರ ಮಿರೆಕರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande