ಲಕ್ನೋ, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಲಕ್ನೋದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಮೊದಲ ಬ್ಯಾಚ್ ಬ್ರಹ್ಮೋಸ್ ಕ್ಷಿಪಣಿಗಳಿಗೆ ಶನಿವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜನಾಥ್ ಸಿಂಗ್ ಅವರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡುತ್ತಾ, ಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ಟ್ರೇಲರ್ ಆಗಿತ್ತು. ಪಾಕಿಸ್ತಾನದ ಪ್ರತಿಯೊಂದು ಇಂಚು ಭೂಮಿಯೂ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. ಶತ್ರುಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ,”
ಎಂದು ಎಚ್ಚರಿಸಿದರು.
“ಲಕ್ನೋ ಈಗ ರಕ್ಷಣಾ ಉತ್ಪಾದನೆಯ ಪ್ರಮುಖ ಕೇಂದ್ರವಾಗಿದೆ. ಇಲ್ಲಿ ಪ್ರತಿ ವರ್ಷ ಸುಮಾರು 100 ಕ್ಷಿಪಣಿ ವ್ಯವಸ್ಥೆಗಳು ತಯಾರಾಗಲಿವೆ. ಬ್ರಹ್ಮೋಸ್ ನೌಕಾಪಡೆ, ಸೇನೆ ಮತ್ತು ವಾಯುಪಡೆಯ ಬೆನ್ನೆಲುಬಾಗಿದೆ. ಭಾರತ ಈಗ ಆತ್ಮವಿಶ್ವಾಸದೊಂದಿಗೆ ತನ್ನ ಕನಸುಗಳನ್ನು ಸಾಕಾರಗೊಳಿಸುತ್ತಿದೆ,” ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa