ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಕೊಪ್ಪಳ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನವೆಂಬರ್ 1 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕೊಪ್ಪಳ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನವೆಂಬರ್ 1 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಅವರು ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸುವ ಕುರಿತು ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ರಾಜ್ಯೋತ್ಸವದಿನದಂದು ಬೆಳಿಗ್ಗೆ 7 ಗಂಟೆಗೆ ಕೊಪ್ಪಳ ನಗರದ ತಹಶೀಲ್ದಾರರ ಕಚೇರಿ ಆವರಣದಲ್ಲಿ ನಾಡ ದೇವತೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೇವಿಯ ಭಾವಚಿತ್ರದ ಮೆರವಣಿಗೆ ಅಶೋಕ ವೃತ್ತ, ಕೇಂದ್ರೀಯ ಬಸ್ ನಿಲ್ದಾಣದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸುವಂತೆ ಹಾಗೂ ಮೆರವಣಿಗೆ ಮತ್ತು ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಬೇಕು.

ಕಾರ್ಯಕ್ರಮ ದಿನದಂದು ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ, ವೇದಿಕೆ ಅಲಂಕಾರ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸೂಕ್ತ ಪೂರ್ವ ತರಬೇತಿ ನೀಡಿ, ಶಿಸ್ತುಬದ್ಧ ಪಥಸಂಚಲನ ಮತ್ತು ಅರ್ಥಪೂರ್ಣವಾದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು. ಕನ್ನಡ ನಾಡು, ನುಡಿ, ದೇಶಭಕ್ತಿ ಗೀತೆಗಳಿಗೆ ಮಾತ್ರ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ರಚಿಸಲ್ಪಟ್ಟ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಮತ್ತು ಅಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯಿಂದ ಅಗತ್ಯ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ.ಕೆ.ಎಸ್.ಆರ್.ಟಿ.ಸಿ ಅವರಿಂದ ಸೂಕ್ತ ಬಸ್ ಸೌಕರ್ಯ ಒದಗಿಸಬೇಕು. ಪಥಸಂಚಲನ ಮತ್ತು ಅದರ ಪೂರ್ವ ತರಬೇತಿಗೆ ಪಾಲ್ಗೊಳ್ಳುವ ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಅಕ್ಷರ ದಾಸೋಹ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಕನ್ನಡ ಮತ್ತು ಸಂಸಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರಿದಂತೆ ಜಿಲ್ಲಾಮಟ್ಟದ ಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande