ಬಳ್ಳಾರಿ, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಅ.21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ವರ್ತಿಕ ಕಟಿಯಾರ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ.ರವಿ ಕುಮಾರ್, ನವೀನ್ ಕುಮಾರ್.ಎನ್ ಸೇರಿದಂತೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್