ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಪ್ರವಾಸ
ರಾಯಚೂರು, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಬಿ ವೆಂಕಟಸಿಂಗ್ ಅವರು ಅಕ್ಟೋಬರ್ 19 ರಿಂದ ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 19ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿAದ ನಿರ್ಗಮಿಸಿ ರಾತ್ರಿ 8 ಗಂ
ರಾಜ್ಯ ಮಾಹಿತಿ ಆಯುಕ್ತರಾದ ಬಿ ವೆಂಕಟಸಿಂಗ್ ಪ್ರವಾಸ


ರಾಯಚೂರು, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಬಿ ವೆಂಕಟಸಿಂಗ್ ಅವರು ಅಕ್ಟೋಬರ್ 19 ರಿಂದ ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಅಕ್ಟೋಬರ್ 19ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿAದ ನಿರ್ಗಮಿಸಿ ರಾತ್ರಿ 8 ಗಂಟೆಗೆ ಮಂತ್ರಾಲಯಕ್ಕೆ ಆಗಮಿಸಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಾಸ್ತವ್ಯ ಮಾಡುವರು.

ಅಕ್ಟೋಬರ್ 20ರಂದು ಬೆಳಗ್ಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದಿವ್ಯದರ್ಶನ ನಂತರ ಬೆಳಗ್ಗೆ 10 ಗಂಟೆಗೆ ಮಂತ್ರಾಯಲದಿ0ದ ನಿರ್ಗಮಿಸಿ ಮಧ್ಯಾಹ್ನ 2 ಗಂಟೆಗೆ ರಾಯಚೂರು ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.

ಅಕ್ಟೋಬರ್ 21ರಂದು ಬೆಳಗ್ಗೆ 7 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಕಲಬುರಗಿಗೆ ಪ್ರಯಾಣಿಸಿ ಬೆಳಗ್ಗೆ 10.30ಕ್ಕೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವರು. ಸಂಜೆ 5.30ಕ್ಕೆ ಕಲಬುರಗಿಯಿಂದ ನಿರ್ಗಮಿಸಿ ರಾಯಚೂರು ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.

ಅಕ್ಟೋಬರ್ 23ರಂದು ಬೆಳಗ್ಗೆ 10 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಅಕ್ಟೋಬರ್ 24ರಿಂದ ಕರ್ನಾಟಕ ಮಾಹಿತಿ ಆಯೋಗದ ಕೇಂದ್ರ ಕಚೇರಿಯಲ್ಲಿ ರಾಜ್ಯ ಮಾಹಿತಿ ಆಯುಕ್ತರು ನಡೆಸುವ ಪ್ರಕರಣಗಳ ವಿಚಾರಣೆಯಲ್ಲಿ ಭಾಗಿಯಾಗುವರು ಎಂದು ಕರ್ನಾಟಕ ಮಾಹಿತಿ ಆಯೋಗದ ಶಾಖಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande