ಅರಣ್ಯದಲ್ಲಿ ಗಾಂಜಾ ಬೆಳೆಯುತ್ತಿದ್ದರೆ ಕ್ರಮ ತೆಗೆದುಕೊಳ್ಳಿ- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಕೊಪ್ಪಳ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರ
ಅರಣ್ಯದಲ್ಲಿ ಗಾಂಜಾ ಬೆಳೆಯುತ್ತಿದ್ದರೆ ಕ್ರಮ ತೆಗೆದುಕೊಳ್ಳಿ- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ನಾರ್ಕೋ ಕೋ-ಆಡಿನೇಷನ್ ಸೆಂಟರ್ (NCORD) ಸಮನ್ವಯ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಮಾದಕ ವಸ್ತುಗಳ ಉತ್ಪನ್ನ, ಸಾಗಾಟ, ಸಂಗ್ರಹ ಮತ್ತು ಮಾರಾಟ ಶಿಕ್ಷ್ಯಾರ್ಹ ಅಫರಾದವಾಗಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಧಾಬಾ, ಹೋಟೆಲ್, ರೆಸಾರ್ಟ್ಗಳಿಗೆ ಸರಪ್ರೈಸ್ ಭೇಟಿ ನೀಡಿ, ಹಾಗೇನಾದರೂ ಮಾಧಕ ವಸ್ತುಗಳ ಸೇವನೆ, ಮಾರಾಟ ಕಂಡು ಬಂದರೆ ಅವುಗಳ ಮೇಲೆ ಕೇಸಗಳನ್ನು ದಾಖಲಿಸಬೇಕೆಂದರು.

ಜನರು ದುಶ್ವಟಗಳಿಂದ ದೂರ ಇರಲು ಇಲಾಖೆಗಳ ಸಹಯೋಗದಲ್ಲಿ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಹಾಸ್ಟೆಲಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಎಲ್. ಅರಸಿದ್ದಿ ಅವರು ಮಾತನಾಡಿ, ಆಸ್ಪತ್ರೆಗಳಲ್ಲಿ ಯಾವ ರೀತಿಯ ಕೇಸಗಳು ಬರುತ್ತವೆ ಎನ್ನುವುದರ ಕುರಿತು ನಮಗೆ ವರದಿ ನೀಡಬೇಕೆಂದು ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂತರೆ ತಕ್ಷಣ ಕ್ರಮ ವಹಿಸಲಾಗುತ್ತದೆ. ಈ ಕುರಿತು ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಿರ್ದೆಶನ ನೀಡಲಾಗುವುದು ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ.ಲಿಂಗರಾಜು, ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕರಾದ ಸುರೇಶ ಜಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande