ರಾಯಚೂರು : ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆಗೆ ಕ್ರಮ
ರಾಯಚೂರು, 19 ಅಕ್ಟೋಬರ್(ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 4,28,172 ಫಲಾನುಭವಿಗಳಿಗೆ 85,63,56,000 ರೂ.ಗಳನ್ನು ರಾಯಚೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇವರ ಮೂಲಕ ಡಿಬಿಟಿ ಪ್ರಕ್ರಿ
ರಾಯಚೂರು : ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆಗೆ ಕ್ರಮ


ರಾಯಚೂರು, 19 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 4,28,172 ಫಲಾನುಭವಿಗಳಿಗೆ 85,63,56,000 ರೂ.ಗಳನ್ನು ರಾಯಚೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇವರ ಮೂಲಕ ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande