ಹಾಸನ, 19 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016ರನ್ನು ಜಾರಿಗೆ ತರಲಾಗಿದೆ. ಸದರಿ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ 14 ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಹಾಸನ ಜಿಲ್ಲೆ ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಪಟಾಕಿ ತಯಾರಿಕೆ, ಮಾರಾಟ ಹಾಗೂ ಇತರೆ ಪ್ರöಕ್ರಿಯೆಗಳು ಅಪಾಯಕಾರಿ ಉದ್ದಿಮೆಗಳ ವ್ಯಾಪ್ತಿಗೆ ಬರುವುದರಿಂದ ಸದರಿ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು, ತಪ್ಪಿದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಾಸನ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಯಮುನ ಕೆ.ಎನ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa