ಬೆಂಗಳೂರು, 19 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದ ನಾಗರಿಕರಿಗೆ ಸ್ಪಂದಿಸಲು 'ಬೆಂಗಳೂರು ನಡಿಗೆ' ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಒಣ ತ್ಯಾಜ್ಯ ನಿರ್ವಹಣೆಯ ಘಟಕಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಶಾಸಕರು, ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಅಧಿಕಾರಿಗಳು ಒಣ ತ್ಯಾಜ್ಯ ನಿರ್ವಹಣೆಯ ಘಟಕದ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು.
ಕಸ ನಿರ್ವಹಣೆ ಎಂಬುದು ಬೆಂಗಳೂರಿನ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ಹೀಗಾಗಿ ಒಣ ತ್ಯಾಜ್ಯ ನಿರ್ವಹಣೆ ಅನಿವಾರ್ಯವಾಗಿದ್ದು, ಇದಕ್ಕೆ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲು ಬದ್ಧವಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa