ಅಕ್ಟೋಬರ್ 27ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
ಶಿವಮೊಗ್ಗ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಅ. 27 ರಂದು ಆಯೋಜಿಸಲಾಗಿದ್ದು, ಇಪಿಎಫ್‌ಒ ಮತ್ತು ಇಎಸ್‌ಐಸಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಡೆಸಲಿದ್ದಾರೆ.
ಅಕ್ಟೋಬರ್ 27ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ


ಶಿವಮೊಗ್ಗ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಅ. 27 ರಂದು ಆಯೋಜಿಸಲಾಗಿದ್ದು, ಇಪಿಎಫ್‌ಒ ಮತ್ತು ಇಎಸ್‌ಐಸಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಡೆಸಲಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ, ಗಾಂಧಿ ಪಾರ್ಕ್ ಎದುರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ವಿದ್ಯಾದಾಯಿನಿ ಶಾಲೆ, ಕೆ.ಆರ್.ನಗರ, ಹರಿಹರ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.

ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande