ಅ.೨೩ರಂದು ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಶಿವಮೊಗ್ಗ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಅ.23 ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮ0ದಿರದಲ್ಲಿ
Jayanti


ಶಿವಮೊಗ್ಗ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಅ.23 ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮ0ದಿರದಲ್ಲಿ ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಕರ್ನಾಟಕ ನಾಟಕ ಅಕಾಡಮಿ ಜಿಲ್ಲಾ ಸಂಚಾಲಕರು ಹಾಗೂ ಕನ್ನಡ ಉಪನ್ಯಾಸಕರಾದ ಡಾ. ಗಣೇಶ ಆರ್. ಕೆಂಚನಾಲ್ ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande