ಮಂಡ್ಯ, 19 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮೂರು ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳ ನಡುವೆ ಡಿಕ್ಕಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ನಡೆದಿದೆ. ಗಾಯಗೊಂಡವರ ಪೈಕಿ 10 ಜನ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಮೈಸೂರಿಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಮೊದಲು ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತಕ್ಕೀಡಾಗಿ ನಿಂತಿದ್ದ ಬಸ್ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa