ನವದೆಹಲಿ, 19 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಕ್ಟೋಬರ್ 21 ರಂದು ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆಯುವ ಪೊಲೀಸ್ ಸ್ಮರಣಾರ್ಥ ದಿನದ ರಾಷ್ಟ್ರೀಯ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ದಿನವನ್ನು 1959ರ ಅಕ್ಟೋಬರ್ 21ರಂದು ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಚೀನೀ ದಾಳಿಯಲ್ಲಿ ಹುತಾತ್ಮರಾದ ಹತ್ತು ವೀರ ಪೊಲೀಸರ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ.
ಚಾಣಕ್ಯಪುರಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಿಎಪಿಎಫ್ ಹಾಗೂ ದೆಹಲಿ ಪೊಲೀಸರ ಜಂಟಿ ಮೆರವಣಿಗೆ ನಡೆಯಲಿದೆ. ಸಚಿವರು ಸ್ಮಾರಕಕ್ಕೆ ಪುಷ್ಪಾರ್ಪಣೆ ಮಾಡಿ ಹುತಾತ್ಮರಿಗೆ ಗೌರವ ಸಲ್ಲಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa