ತಮಿಳುನಾಡು ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ವಿತರಿಸಿದ ಟಿವಿಕೆ ಪಕ್ಷ
ಚೆನೈ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ತಮಿಳು ನಟ ಮತ್ತು ರಾಜಕಾರಣಿ ವಿಜಯ್ ಅವರ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ), ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ತಲಾ ₹20 ಲಕ್ಷ ಆರ್ಥಿಕ ನೆರವು ನೀಡಿದೆ. ಪಕ್ಷವು ಹಣವನ್ನು ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ. ಸೆಪ
Tvk


ಚೆನೈ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ತಮಿಳು ನಟ ಮತ್ತು ರಾಜಕಾರಣಿ ವಿಜಯ್ ಅವರ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ), ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ತಲಾ ₹20 ಲಕ್ಷ ಆರ್ಥಿಕ ನೆರವು ನೀಡಿದೆ. ಪಕ್ಷವು ಹಣವನ್ನು ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ.

ಸೆಪ್ಟೆಂಬರ್ 28 ರಂದು ಘೋಷಿಸಿದಂತೆ, ಅಕ್ಟೋಬರ್ 18 ರಂದು ಬ್ಯಾಂಕ್ ಆರ್‌ಟಿಜಿಎಸ್ ಮೂಲಕ ಕುಟುಂಬ ಕಲ್ಯಾಣ ನಿಧಿಯಾಗಿ ೨೦ ಲಕ್ಷ ರೂಪಾಯಿಗಳನ್ನು ಕಳುಹಿಸಲಾಗಿದೆ ಎಂದು ಟಿವಿಕೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದೆ.

ಈ ಸಹಾಯವನ್ನು ಸ್ವೀಕರಿಸಲು ಪಕ್ಷವು ಪೀಡಿತ ಕುಟುಂಬಗಳನ್ನು ವಿನಂತಿಸಿದೆ. ಪಕ್ಷದ ಪ್ರಕಾರ, 39 ಕುಟುಂಬಗಳಿಗೆ ತಲಾ ೨೦ ಲಕ್ಷ ರೂಪಾಯಿಗಳನ್ನು ಕಳುಹಿಸಲಾಗಿದೆ, ಒಟ್ಟು 7.8 ಕೋಟಿ ರೂಪಾಯಿಗಳ ಸಹಾಯವನ್ನು ನೀಡಲಾಗಿದೆ.

ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 39 ಜನರು ಸಾವನ್ನಪ್ಪಿ, 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಘಟನೆಯ ನಂತರ, ಟಿವಿಕೆ ಮೃತರ ಕುಟುಂಬಗಳಿಗೆ ₹೨೦ ಲಕ್ಷ ಪರಿಹಾರವನ್ನು ಘೋಷಿಸಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande