ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ
ತುಮಕೂರು, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ
Kabbadi


ತುಮಕೂರು, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಜಿಲ್ಲೆಗಳಿಂದ 62 ತಂಡಗಳು ಈ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡಿವೆ. ಈ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲ ತಂಡಗಳಿಗೆ ಅಭಿನಂದನೆಗಳು. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಬಹುಮುಖ್ಯ ಎಂದರು.

ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಯಗಳಿಸಿ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.

ಜನವರಿ 15 ರಿಂದ 7 ದಿನಗಳವರೆಗೆ ತುಮಕೂರು ನಗರದಲ್ಲಿ ರಾಜ್ಯಮಟ್ಟದ ಒಲಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್, ಟೆನ್ನಿಸ್, ಕಬಡ್ಡಿ, ಸ್ವಿಮ್ಮಿಂಗ್ ಸೇರಿದಂತೆ ಸುಮಾರು 27 ಕ್ರೀಡಾಕೂಟಗಳು ನಡೆಯಲಿವೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧೆಡೆಗಳಿಂದ 4600 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲವನ್ನು ಅಚ್ಚುಕಟ್ಟಾಗಿ ನಡೆಸಿಕೊಡಲಾಗುವುದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande