ರಾಯಚೂರು : ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿ
ರಾಯಚೂರು, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದಾಗಿ ವ್ಯಕ್ತಿತ್ವ ವಿಸಕನಕ್ಕೆ ಸಹಕಾರಿಯಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಹೇಳಿದರು. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಿ
ರಾಯಚೂರು  : ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿ


ರಾಯಚೂರು  : ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿ


ರಾಯಚೂರು  : ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿ


ರಾಯಚೂರು, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದಾಗಿ ವ್ಯಕ್ತಿತ್ವ ವಿಸಕನಕ್ಕೆ ಸಹಕಾರಿಯಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವಜನಾಂಗ ಭಾಗವಹಿಸುವಿಕೆಯು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಮೊಬೈಲ್ ಬಳಕೆ ಮತ್ತು ಅನಗತ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಕಳೆದು ಹೋಗಬಾರದು. ಓದಿನ ಜೊತೆಗೆ ವಿದ್ಯಾರ್ಥಿ ಯುವಜನರು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ನಾಯಕತ್ವ ಗುಣ ಸೇರಿದಂತೆ ಸಮಾಜಮುಖಯಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಅವರು ಸಲಹೆ ಮಾಡಿದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರೇಶ ನಾಯಕ ಅವರು ಮಾತನಾಡಿ, ಸಂಸ್ಕೃತಿ ಉಳಿಸಿ, ಬೆಳೆಸುವಲ್ಲಿ ಯುವ ಜನತೆಯ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಯುವ ಜನರು ನಾಟಕ, ನೃತ್ಯ, ಜನಪದ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ತಿಳಿಸಿದರು.

ಇಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗುತ್ತಾರೆ. ಯಾದಗಿರಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದ್ದು, ಅಲ್ಲಿ ವಿಜೇತರಾದವರು ರಾಷ್ಟ್ರೀಯ ಮಟ್ಟಕ್ಕೆ ಅರ್ಹರಾಗುತ್ತಾರೆ ಎಂದು ವೀರೇಶ ನಾಯಕ ಅವರು ತಿಳಿಸಿದರು.

ಯುವಜನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 180ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸ್ಪರ್ಧಿಯಾಗಿ ಭಾಗವಹಿಸಿದ್ದರು. ಜನಪದ ಗೀತೆ, ಜನಪದ ನೃತ್ಯ, ಸ್ಟೋರಿ ರೈಟಿಂಗ್, ಕವಿತೆ ಬರೆಯುವುದು, ಘೋಷಣೆ ಸೇರಿದಂತೆ ಹಲವು ಸ್ಪರ್ಧೆಗಳನ್ಮ್ನ ಆಯೋಜಿಸಿ ವಿದ್ಯಾರ್ಥಿಗಳ ಸೂಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಒದಗಿಸಲಾಯಿತು.

ಇದೇ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಅಧಿಕಾರಿಗಳು ಸೇರಿದಂತೆ ತೀರ್ಪುಗಾರರು ಹಾಗೂ ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande