ಬೆಂಗಳೂರು, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಿ ಎಸ್ ಅರುಣ್ ಮಾಚಯ್ಯ ಅವರ ಪದಗ್ರಹಣ ಸಮಾರಂಭ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಭಾಗವಹಿಸಿ ನೂತನ ಉಪಾಧ್ಯಕ್ಷರಿಗೆ ಶುಭ ಕೋರಿದರು.
ಅನೇಕ ವರ್ಷಗಳಿಂದ ಗ್ರಾಮ ಪಂಚಾಯಿತಿ ಸದಸ್ಯರಾಗಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತಿ ಸದಸ್ಯರಾಗಿ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ ಅವರ ಸುಧೀರ್ಘ ಪಕ್ಷ ಸಂಘಟನೆಗೆ ಸಂದ ಗೌರವವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa