ಬಳ್ಳಾರಿ-ಮಹಾತ್ಮಾ ಗಾಂಧೀಜಿ ಮತ್ತು ಶಾಸ್ತ್ರಿ ಜನ್ಮ ದಿನಾಚರಣೆ
ಬಳ್ಳಾರಿ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಗುರುವಾರ ಆಚರಣೆ ಮಾಡಲಾಯಿತು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರ
ಬಳ್ಳಾರಿ-ಮಹಾತ್ಮಾ ಗಾಂಧೀಜಿ ಮತ್ತು ಶಾಸ್ತ್ರಿ ಜನ್ಮ ದಿನಾಚರಣೆ


ಬಳ್ಳಾರಿ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಗುರುವಾರ ಆಚರಣೆ ಮಾಡಲಾಯಿತು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ನಿಕಟಪೂರ್ವ ಅಧ್ಯಕ್ಷರಾದ ಬಿ. ಮಹಾರುದ್ರಗೌಡ, ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು, ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ, ಉಪಾಧ್ಯಕ್ಷರಗಳಾದ ಎಸ್. ದೊಡ್ಡನಗೌಡ, ಸೊಂತ ಗಿರಿಧರ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೆಡ್ ಮಲ್ಲಿಕಾರ್ಜುನ ಗೌಡ, ವಿ. ರಾಮಚಂದ್ರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande