ಮೈಸೂರು, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮೈಸೂರಿನಲ್ಲಿ ಮಧ್ಯಾಹ್ನ 1- 1.18ರ ಶುಭ ಧನುರ್ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಈಡುಗಾಯಿ ಒಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿಖ್ಯಾತ ಜಂಬೂ ಸವಾರಿ ಇಂದು ನಡೆಯಲಿದೆ. ಈಗಾಗಲೇ ನಂದಿ ಧ್ವಜ ಪೂಜೆ ನೆರವೇರಿದೆ. ಎಲ್ಲಾ ಪ್ರವಾಸಿಗರಿಗೆ ಸ್ವಾಗತ ಕೋರುತ್ತೇನೆ ಎಂದರು.
ಹಿಂದೆ ಮುಖ್ಯಮಂತ್ರಿ ಆಗಿದ್ದಾಗಲೂ ನಾನು ದಸರಾದಲ್ಲಿ ಭಾಗಿಯಾಗಿದ್ದೇನೆ. ಮುಖ್ಯಮಂತ್ರಿಯಾಗಿ 8 ಬಾರಿ ದಸರಾಕ್ಕೆ ಬಂದಿದ್ದೇನೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ರಾಜ್ಯದ ಜನ ಎಲ್ಲರೂ ಖುಷಿಯಾಗಿದ್ದರೆ ಸರ್ಕಾರ ಸಹ ಸಂತೋಷವಾಗಿರುತ್ತದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸುವ ವೇಳೆ ಸಚಿವ ಮಹಾದೇವಪ್ಪ, ಭೈರತಿ ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa