ನಾಗರಿಕರು ಸ್ವಚ್ಚತೆಗೆ ಆದ್ಯತೆ ನೀಡಿ : ಸಂಸದ ಶ್ರೇಯಸ್ ಪಟೇಲ್
ಹಾಸನ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನಾಗರಿಕರು ಸ್ವಚ್ಚತೆಗೆ ಆದ್ಯತೆ ನೀಡುವಂತೆ ಹಾಸನ ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಹಾಸನದಲ್ಲಿ ಏರ್ಪಡಿಸಿದ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವತಃ ಸ್ವಚ್ಛತಾ ಕಾರ್ಯ ಮಾಡಿ
Cleaning


ಹಾಸನ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನಾಗರಿಕರು ಸ್ವಚ್ಚತೆಗೆ ಆದ್ಯತೆ ನೀಡುವಂತೆ ಹಾಸನ ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು.

ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಹಾಸನದಲ್ಲಿ ಏರ್ಪಡಿಸಿದ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವತಃ ಸ್ವಚ್ಛತಾ ಕಾರ್ಯ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ನಗರಗಳನ್ನೂ ಸ್ವಚ್ಛವಾಗಿಡಬೇಕು. ಸ್ವಚ್ಛತೆ ಕಾಪಾಡುವುದು ಸಾರ್ವಜನಿಕರ ಕರ್ತವ್ಯ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಲತಾ ಕುಮಾರಿ, ಮಹಾಪೌರ ಗಿರೀಶ್ ಚೆನ್ನವೀರಪ್ಪ, ಉಪಮೇಯರ್ ಹೇಮಾವತಿ ಸೇರಿದಂತೆ ಹಲವು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ನಾಗರಿಕರು ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ಮೂಲದಲ್ಲಿಯೇ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಕೊಡಬೇಕೆಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande