ಹುಬ್ಬಳ್ಳಿ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀಮತಿ ಬೇಲಾ ಮೀನಾ ಅವರು ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಶ್ರಮದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಂತರ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಅವರ ಆದರ್ಶಗಳನ್ನು ಸ್ಮರಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ, ಶ್ರೀಮತಿ ಬೇಲಾ ಮೀನಾ ಅವರು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಪರಿಸರ ಸ್ನೇಹಿ ಕೈ ಚೀಲಗಳನ್ನು ವಿತರಿಸುವ ಮೂಲಕ, ಪರಿಸರ ಸಂರಕ್ಷಣೆ ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa