ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ-ಪ್ರಮಾಣ ಪತ್ರ ವಿತರಣೆ
ವಿಜಯಪುರ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶೃತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ
ಬಹುಮಾನ


ವಿಜಯಪುರ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶೃತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿಜಯಪುರದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ನಗರದ ಜಲನಗರ ಸರ್ಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಅನ್ನಪೂರ್ಣ ಬ.ಪೂಜಾರಿ ಪ್ರಥಮ, ಇಂಡಿ ತಾಲೂಕಿನ ನಾದ ಕೆ.ಡಿ.ಯ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸೃಷ್ಟಿ ಹಳೇಮನಿ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನ ಸಿಂದಗಿ ತಾಲೂಕಿನ ಕೆರೂಟರಗಿ ಆರ್.ಎಂ.ಎಸ್.ಎ. ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೇಯಾ ಮ.ಪಾಟೀಲ ಮತ್ತು ಪದವಿ ಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಗೌರಿ ತೆಲಗಿ ಪ್ರಥಮ, ವಿಜಯಪುರ ನಗರದ ಬಾಲಕಿಯರ ಸರಕಾರಿ ಪೂರ್ವ ಕಾಲೇಜಿನ ಲಕ್ಷ್ಮೀ ಎಂ.ಮಾಳೆ ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿಜಯಪುರ ಸಿಕ್ಯಾಬ್ ಮಹಿಳಾ ಪದವಿ ಪೂರ್ವ ಕಾಲೇಜಿನ ಚೇತನಾ ಬಿ.ಬಗಲಿ ಮತ್ತು ಬಬಲೇಶ್ವರ ತಾಲೂಕಿನ ಅರ್ಜುಣಗಿ ಸರಕಾರಿ ಪದವಿಪೂರ್ವ ಕಾಲೇಜಿನ ಮೇಘಾ ಕೊಟ್ಯಾಳ ಅವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯ ರಜಪೂತ ಪ್ರಥಮ, ಝಳಕಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸೌಮ್ಯ ಎಸ್.ಬಿರಾದಾರ ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ದೇವರಹಿಪ್ಪರಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿ ರಾಧಿಕಾ ಧರ್ಮಶೆಟ್ಟಿ ಅವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ವೇದಿಕೆಯ ಗಣ್ಯರು ವಿತರಿಸಿದರು. ಮಹಿಳಾ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೀರಯ್ಯ ಸಾಲಿಮಠ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ ಚಂದ್ರಶೇಖರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎ.ಐ.ಹಂಜಗಿ ಅವರು ಗಾಂಧೀಜಿಯವರ ವಿಚಾರಧಾರೆಗಳ ಕುರಿತ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಬಹಳಷ್ಟು ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಬಂಧ ಸ್ಪರ್ಧೆಗೆ ನೋಡಲ್ ಅಧಿಕಾರಿಗಳಾಗಿ ಪದವಿ ಪೂರ್ವ ಕಾಲೇಜಿನ ವಿಭಾಗದಲ್ಲಿ ಉಪನ್ಯಾಸಕರಾದ ಆರ್ ಸಿ ಹಿರೇಮಠ್ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶ್ರೀಮತಿ ಎಸ್ ಎಸ್ ಹಳೆಮನೆ ಕಾರ್ಯನಿರ್ವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ್ ಡಂಬಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ್ ಸೌದಾಗರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ಹೊಸಮನಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಬಿ ಕುಂಬಾರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೆÇೀತದಾರ,ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಅಡಿವೆಪ್ಪ ಸಾಲಗಲ್, ವಿದ್ಯಾವತಿ ಅಂಕಲಗಿ, ಪೀಟರ್ ಅಲೆಕ್ಸಾಂಡರ್, ಸುರೇಶ ಘೋಣಸಗಿ, ಬಾಬುಗೌಡ ಪಾಟೀಲ್,ನಿಲೇಶ ಬೇನಾಳ, ನಾಗರಾಜ ಲಂಬೂ, ಭೀಮರಾಯ ಜಿಗಜಿಣಗಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಶಾಲಾ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande