ಅ.7ರಂದು ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ವಿಜಯಪುರ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಕಲಾ ತಂಡಗಳೊಂದಿಗೆ ಕಂದಗಲ
ಅ.7ರಂದು ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ


ವಿಜಯಪುರ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು.

ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಕಲಾ ತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದ ಆವರಣವರೆಗೆ ಮೆರವಣಿಗೆ ನಡೆಯಲಿದೆ.

ಬೆಳಿಗ್ಗೆ 10.30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ಸಂಘ-ಸ0ಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು, ಎಲ್ಲಾ ಸಮೂದಾಯದ ಗಣ್ಯರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೊತ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande