ಧಾರವಾಡ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಹಾತ್ಮ ಗಾಂಧೀಜಿ ಅವರ 156 ನೇ ಜಯಂತಿಯ ನಿಮಿತ್ಯ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ವಾರ್ತಾ ಭವನದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ನವಲಗುಂದ ಶಾಸಕ ಎನ್.ಎಚ್ ಕೋನರಡ್ಡಿ ಅವರು ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ಮಾಡಿ, ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ವಿನಯ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೋಲೀಸ ವರಿಷ್ಠಾಧಿಕಾರಿ ಗುಂಜನ ಆರ್ಯ, ಉಪ ಪೋಲೀಸ್ ಆಯುಕ್ತ ಮಹಾನಿಂಗ್ ನಂದಗಾಂವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ, ತಹಸಿಲ್ದಾರ ಡಾ. ಡಿ.ಎಚ್.ಹೂಗಾರ, ಹು-ಧಾ ಮಹಾನಗರ ಪಾಲಿಕೆಯ ಸದಸ್ಯ ವಿಜಯಾನಂದ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa