ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರೀ ಜಯಂತಿ
ಶಿವಮೊಗ್ಗ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನೇತಾರರ ಭಾವಚಿತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪುಷ್ಪ
Bjp


ಶಿವಮೊಗ್ಗ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನೇತಾರರ ಭಾವಚಿತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪುಷ್ಪನಮನ ಸಲ್ಲಿಸಿದರು.

ದೇಶಕ್ಕೆ ಅಗ್ರಮಾನ್ಯ ಕೊಡುಗೆ ನೀಡಿರುವ ಇಬ್ಬರೂ ಶ್ರೇಷ್ಠ ನೇತಾರರನ್ನು ಸ್ಮರಿಸಿ, ನಮಗೆ ದೊರೆತಿರುವ ಸ್ವಾತಂತ್ರ್ಯ ಹಾಗೂ ದೇಶದ ಅಭಿವೃದ್ಧಿಪಥವನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಸಾಗುವ ನಿಟ್ಟಿನಲ್ಲಿ ಸ್ವದೇಶಿ ವಸ್ತುಗಳ ಬಳಕೆ ಹಾಗೂ ಉತ್ತೇಜನವನ್ನು ಆಧ್ಯತೆಯಾಗಿಸಿಕೊಳ್ಳಬೇಕೆಂಬ ಸಂಕಲ್ಪ ಮಾಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande