ವಿಜಯಪುರ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ. ಅರುಣ ಚಂ.ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಲಾಲ ಬಹಾದ್ದೂರ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ದೇಶದ ಸೈನಿಕರು ಮತ್ತು ರೈತರ ಮಹತ್ವವನ್ನು ನೆನಪಿಸುವ ಶಾಶ್ವತ ಸಂದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಹಂಗಾಮಿ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ. ಹೊನ್ನುಟಗಿ, ಆರ್ ಆ್ಯಂಡ್ ಡಿ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ಪೆಥಾಲಾಜಿ ವಿಭಾಗದ ಮುಖ್ಯಸ್ಥೆ ಡಾ. ಸುರೇಖಾ ಹಿಪ್ಪರಗಿ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್. ಜಿ. ಕುಲಕರ್ಣಿ, ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ., ಉಪಕುಲಸಚಿವ, ಸತೀಶ ಪಾಟೀಲ, ಸಹಾಯಕ ಕುಲಸಚಿವ ಡಾ. ಶ್ರೀಧರ ಬಗಲಿ, ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ, ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ವಿವಿ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande