ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ
ವಿಜಯಪುರ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಯಂತಿ


ವಿಜಯಪುರ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಇತರರು ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ಧರ್ಮ ಗುರುಗಳಾದ ಸಂಸ್ಕøತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಆಸೀಫ್ ಎಲ್. ಮುದಗಲ್ಲ ಕುರಾನ ಹಾಗೂ ಫ್ರೆಡ್ಡಿರಾಜ ಬೈಬಲ್ ಕುರಿತು ಪಠಣ ಮಾಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande