ಸ್ವಚ್ಛತೆಗೆ ಆದ್ಯತೆ ನೀಡಿದವರು ಗಾಂಧೀಜಿ : ಮಹಾಪೌರ ಮಂಗೇಶ ಪವಾರ್
ಬೆಳಗಾವಿ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಬೆಳಗಾವಿ ವೀರಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾಪೌರ ಮಂಗೇಶ ಪವಾರ್ ಮಾತನಾಡಿ, ಗಾಂಧೀಜಿಯವರು ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿದವರು. ಆದ್ದರಿಂದ ನಗರವನ್ನು ಸ್ವಚ್ಛವಾಗಿರಿಸಲು ಪ್
ಸ್ವಚ್ಛತೆಗೆ ಆದ್ಯತೆ ನೀಡಿದವರು ಗಾಂಧೀಜಿ : ಮಹಾಪೌರ ಮಂಗೇಶ ಪವಾರ್


ಬೆಳಗಾವಿ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಬೆಳಗಾವಿ ವೀರಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾಪೌರ ಮಂಗೇಶ ಪವಾರ್ ಮಾತನಾಡಿ, ಗಾಂಧೀಜಿಯವರು ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿದವರು. ಆದ್ದರಿಂದ ನಗರವನ್ನು ಸ್ವಚ್ಛವಾಗಿರಿಸಲು ಪ್ರತಿಯೊಬ್ಬ ನಾಗರಿಕರು ಸಹಕರಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿದ್ಯಾರ್ಥಿಗಳಿಗೆ ಗಾಂಧೀಜಿಯವರ ಜೀವನವನ್ನು ಪ್ರೇರಣೆಯಾಗಿ ತೆಗೆದುಕೊಂಡು ಉತ್ತಮ ಪ್ರಜೆಗಳಾಗಿ, ದೇಶಸೇವೆಗೆ ಸಮರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಸಾಹಿತಿ ಪ್ರಕಾಶ ಗಿರಿಮಲ್ಲನ್ನವರ ಉಪನ್ಯಾಸದಲ್ಲಿ, 1924ರ ಬೆಳಗಾವಿ ಅಧಿವೇಶನದಲ್ಲಿ ಗಾಂಧೀಜಿ ಅಸ್ಪೃಶ್ಯತೆಯ ನಿವಾರಣೆಗೆ ನೀಡಿದ ಕರೆ ಇತಿಹಾಸ ಪ್ರಸಿದ್ಧ ನಿರ್ಣಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಆಸೀಫ್ ಸೇಠ್, ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ ಅನೇಕರು ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande