ಬೆಂಗಳೂರು, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಕೃತಿ ಪ್ರತಿಯೊಬ್ಬರ ಆಸ್ತಿ ಈ ಸಂಪತ್ತನ್ನು ಇಂದಿನ ಯುವಪೀಳಿಗೆ ಕಾಪಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ಬೆಂಗಳೂರಿನಲ್ಲಿ 71ನೇ ವನ್ಯಜೀವಿ ಸಪ್ತಾಹ ಆಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ “ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ” ಕಾರ್ಯಕ್ರಮಕ್ಕೆ ವಿಧಾನ ಸೌಧದ ಮುಂಭಾಗ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ರಾಜ್ಯ ಅರಣ್ಯ ಮತ್ತು ಪ್ರಕೃತಿ ಸಂಪತ್ತಿನ ನಾಡು. ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ ಮೂಲಕ ಶಕ್ತಿ ತುಂಬಲು ಬಂದಿರುವ ಎಲ್ಲಾ ವನ್ಯ ಪ್ರೇಮಿಗಳಿಗೆ ಅಭಿನಂದನೆಗಳು. ಕಾಡು ಈಗ ನಾಡು ಆಗಿದೆ. ಕಾಡು ಉಳಿದರೆ ಮಾತ್ರ ನಾಡು ಉಳಿದೀತು. ನಮ್ಮ ಸಂಸ್ಕೃತಿ, ನಮ್ಮ ಪ್ರಕೃತಿಯನ್ನು ನಾವು ಉಳಿಸಿಕೊಳ್ಳಬೇಕು ಎಂದು ಹೋರಾಡುತ್ತಿದ್ದೇವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa