ಅದ್ದೂರಿ ತೆರೆ ಕಂಡ ಕಾಂತಾರ ಚಾಪ್ಟರ್ 1 ಚಿತ್ರ
ಬೆಂಗಳೂರು, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ವಿಜಯದಶಮಿ ದಿನವಾದ ಇಂದು ವಿಶ್ವದಾದ್ಯಂತ ತೆರೆ ಕಂಡಿದೆ. ಬೆಂಗಳೂರಿನ ವೀರೇಶ್, ಸಂತೋಷ್ ಸೇರಿದಂತೆ ಹಲವು ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಬೆಳಗ್ಗೆಯಿಂದ ಮೊದಲ ಶೋ ಆರಂಭಗೊಂಡಿದ್ದು, ಅಭಿಮಾನಿಗ
Kantara


ಬೆಂಗಳೂರು, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ವಿಜಯದಶಮಿ ದಿನವಾದ ಇಂದು ವಿಶ್ವದಾದ್ಯಂತ ತೆರೆ ಕಂಡಿದೆ.

ಬೆಂಗಳೂರಿನ ವೀರೇಶ್, ಸಂತೋಷ್ ಸೇರಿದಂತೆ ಹಲವು ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಬೆಳಗ್ಗೆಯಿಂದ ಮೊದಲ ಶೋ ಆರಂಭಗೊಂಡಿದ್ದು, ಅಭಿಮಾನಿಗಳು ಅಪಾರ ಉತ್ಸಾಹದಿಂದ ಸ್ವಾಗತಿಸಿದ್ದಾರೆ.

ಕರ್ನಾಟಕದಲ್ಲಿ ಮಾತ್ರವೇ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಿದ್ದು, ಮೊದಲ ದಿನ ಎರಡು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳು ನಡೆಯಲಿವೆ. ದೇಶ-ವಿದೇಶ ಸೇರಿ 7,000ಕ್ಕೂ ಹೆಚ್ಚು ತೆರೆಯಲ್ಲಿ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಚಿತ್ರ ಬಿಡುಗಡೆಗೊಂಡಿದೆ.

ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ತಮಿಳು ನಟ ಜಯರಾಂ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande