ಮಹಾತ್ಮ ಗಾಂಧಿ ಜಯಂತಿ : ಪ್ರಧಾನಿ ಗೌರವ ನಮನ
ನವದೆಹಲಿ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ಗಾಂಧಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪು ಅವರ ಅ
Pm


ನವದೆಹಲಿ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು.

ಗಾಂಧಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ಪ್ರದರ್ಶಿಸಿದರು ಎಂದು ಸ್ಮರಿಸಿದ್ದಾರೆ.

ಜನರನ್ನು ಸಬಲೀಕರಣಗೊಳಿಸುವ ಅಗತ್ಯ ಸಾಧನವಾಗಿ ಸೇವೆ ಮತ್ತು ಕರುಣೆಯ ಶಕ್ತಿಯನ್ನು ಅವರು ನಂಬಿದ್ದರು. ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಅನ್ವೇಷಣೆಯಲ್ಲಿ ನಾವು ಅವರ ಮಾರ್ಗವನ್ನು ಅನುಸರಿಸುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande