ಜಂಬೂಸವಾರಿಯಲ್ಲಿ ೧೫೦ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿ
ಮೈಸೂರು, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಂಜೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಲಿವೆ. ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಸಾಗಲು ಸಿದ್ಧ
ಜಂಬೂಸವಾರಿಯಲ್ಲಿ ೧೫೦ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿ


ಮೈಸೂರು, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಂಜೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಲಿವೆ.

ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಸಾಗಲು ಸಿದ್ಧಗೊಂಡಿವೆ. 31 ಜಿಲ್ಲೆಗಳು ಹಾಗೂ ವಿವಿಧ ಇಲಾಖೆಗಳು ಸೇರಿದಂತೆ 58 ಟ್ಯಾಬ್ಲೋಗಳು ಅಂಬಾವಿಲಾಸ ಅರಮನೆಯ ಆವರಣದಲ್ಲಿ ಸಿದ್ಧಗೊಂಡಿವೆ. ಈ ಮೂಲಕ ತಮ್ಮ ಸ್ಥಳೀಯ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಯೋಜನೆಗಳು ಸೇರಿದಂತೆ ಹಲವು ಮಹತ್ವ ಸಾರಲಿವೆ.

ಜಂಬೂ ಸವಾರಿ ಹಿನ್ನೆಲೆ ಮೈಸೂರಿನಾದ್ಯಂತ ಬಿಗಿಭದ್ರತೆ ಕೈಗೊಳ್ಳಲಾಗಿದೆ, ವಿವಿಧ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚಿತ್ರದುರ್ಗ, ಚಿಕ್ಕಮಗಳೂರು, ಕೊಪ್ಪಳ, ಬೆಳಗಾವಿಯಿಂದ ಗರುಡ ಪಡೆ, ಶ್ವಾನದಳ, ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದೆ. ಜೊತೆಗೆ ಜಂಬೂಸವಾರಿ ಸಾಗುವ ಮಾರ್ಗದ ಉದ್ದಕ್ಕೂ ಭಾರಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande