ನವದೆಹಲಿ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದರು. ದೂರವಾಣಿ ಮೂಲಕ ಮಾತನಾಡಿರುವ ಪ್ರಧಾನಿ ಮೋದಿ, ಖರ್ಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಮೋದಿ , ದೂರವಾಣಿ ಮೂಲಕ ಖರ್ಗೆ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದು, ಅವರು ಬೇಗ ಚೇತರಿಸಿಕೊಳ್ಳಲಿ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.
ಖರ್ಗೆ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರ್ನಾಟಕ ಐಟಿ ಸಚಿವ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆ, “ಮಲ್ಲಿಕಾರ್ಜುನ ಖರ್ಗೆ ಅವರ ಪೇಸ್‌ಮೇಕರ್ ಇಂಪ್ಲಾಂಟ್ ಪ್ರಕ್ರಿಯೆ ಇಂದು ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa