ತುಮಕೂರು ದಸರಾ ಉತ್ಸವ ಮೆರವಣಿಗೆಗೆ ಪರಮೇಶ್ವರ ಚಾಲನೆ
ತುಮಕೂರು, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ 2ನೇ ವರ್ಷದ ''ತುಮಕೂರು ದಸರಾ ಉತ್ಸವ 2025'' ಕಾರ್ಯಕ್ರಮದ ವಿಜಯದಶಮಿ ದಿನವಾದ ಇಂದು ನಗರದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ವೃತ್ತದಲ್ಲಿ‌ ಗೃಹ ಸಚಿವ ಜಿ.ಪರಮೇಶ್ವರ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಆನೆ
Tumakur dasara


ತುಮಕೂರು, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ 2ನೇ ವರ್ಷದ 'ತುಮಕೂರು ದಸರಾ ಉತ್ಸವ 2025' ಕಾರ್ಯಕ್ರಮದ ವಿಜಯದಶಮಿ ದಿನವಾದ ಇಂದು ನಗರದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ವೃತ್ತದಲ್ಲಿ‌ ಗೃಹ ಸಚಿವ ಜಿ.ಪರಮೇಶ್ವರ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಆನೆ ಮೇಲೆ ಅಂಬಾರಿಯಲ್ಲಿದ್ದ ನಾಡಿನ ಅಧಿ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ನಗರದಲ್ಲಿ ಪೊಲೀಸ್ ಇಲಾಖೆಯ ಅಶ್ವ ದಳ, ಜಾನಪದ ಕಲಾ ತಂಡಗಳು, ಆಕರ್ಷಣೀಯ ಹಳ್ಳಿಕಾರ್ ತಳಿಯ ಎತ್ತುಗಳು,‌ ಸಾಂಸ್ಕೃತಿಕ ಕಲಾ ತಂಡಗಳು, ಸಾರೋಟ್‌ನಲ್ಲಿ 50ಕ್ಕೂ ಹೆಚ್ಚು ಗ್ರಾಮ ದೇವತೆಗಳೊಂದಿಗೆ ಆನೆಯ ಮೇಲೆ ವಿರಾಜಮಾನರಾಗಿದ್ದ ಶ್ರೀ ಚಾಮುಂಡೇಶ್ವರಿ ದೇವಿಯ ಅದ್ಧೂರಿ ಜಂಬೂಸವಾರಿ ಮೆರವಣಿಗೆ ಜೂನಿಯರ್ ಕಾಲೇಜು ಮೈದಾನದವರೆಗೆ ಸಾಗಿತು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ರವರು, ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಶಾಸಕರಾದ ಬಿ.ಸುರೇಶ್‌ಗೌಡ, ಮಾಜಿ ಸಚಿವರಾದ ಸೊಗಡು ಶಿವಣ್ಣ, ಮಾಜಿ ಶಾಸಕ ಗೌರಿಶಂಕರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ಗೌಡ ಮುಂತಾದವರು ಇದ್ದರು‌.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande