ನವದೆಹಲಿ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಖ್ಯಾತ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಛನ್ನುಲಾಲ್ ಮಿಶ್ರಾ (91) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಿಶ್ರಾ ಭಾರತೀಯ ಶಾಸ್ತ್ರೀಯ ಸಂಗೀತದ ಮಹಾನ್ ದೈತ್ಯರು. ತಮ್ಮ ಕಲೆಯಿಂದ ಭಾರತವನ್ನು ಮಾತ್ರವಲ್ಲದೆ ಜಗತ್ತನ್ನೂ ಶ್ರೀಮಂತಗೊಳಿಸಿದ್ದಾರೆ. ಶಾಸ್ತ್ರೀಯ ಸಂಗೀತವನ್ನು ಜನಸಾಮಾನ್ಯರಿಗೆ ತಲುಪಿಸಲು, ವಿಶ್ವ ವೇದಿಕೆಯಲ್ಲಿ ಭಾರತೀಯ ಸಂಪ್ರದಾಯಗಳನ್ನು ಸ್ಥಾಪಿಸಲು ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಮಿರ್ಜಾಪುರದಲ್ಲಿ ಗುರುವಾರ ಬೆಳಿಗ್ಗೆ 4:15ಕ್ಕೆ ಸೆಪ್ಟಿಸೆಮಿಯಾದಿಂದ ಬಳಲುತ್ತಿದ್ದ ಮಿಶ್ರಾ ಅವರ ನಿಧನರಾಗಿದ್ದಾರೆ , ಅಂತ್ಯಕ್ರಿಯೆ ವಾರಣಾಸಿಯಲ್ಲಿ ನಡೆಯಲಿದೆ. ಬನಾರಸ್ ಘರಾನಾದ ಪ್ರಮುಖ ಗಾಯಕರಾಗಿದ್ದ ಅವರು ಖಯಾಲ್, ಠುಮ್ರಿ, ದಾದ್ರ, ಚೈತಿ ಮತ್ತು ಭಜನ್ ಗಾಯನದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa