ರಾಯಚೂರು : ನಾಳೆ ಸಚಿವ ಎನ್.ಎಸ್.ಬೋಸರಾಜು ಪ್ರವಾಸ
ರಾಯಚೂರು, 02 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ನಾಳೆ 3 ರಿಂದ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಗೆ ರಾಯಚೂರನಿಂದ ನಿರ್ಗಮಿಸಿ ಸಿರವಾರ ತಾಲೂಕಿನ ನವಲಕಲ್‌ಗೆ ಭೇಟಿ ನೀಡುವರು. ಬ
ರಾಯಚೂರು : ನಾಳೆ ಸಚಿವ ಎನ್.ಎಸ್.ಬೋಸರಾಜು ಪ್ರವಾಸ


ರಾಯಚೂರು, 02 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ನಾಳೆ 3 ರಿಂದ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 8 ಗಂಟೆಗೆ ರಾಯಚೂರನಿಂದ ನಿರ್ಗಮಿಸಿ ಸಿರವಾರ ತಾಲೂಕಿನ ನವಲಕಲ್‌ಗೆ ಭೇಟಿ ನೀಡುವರು. ಬೆಳಗ್ಗೆ 9.30ಕ್ಕೆ ಹೀರಾಮಠಕ್ಕೆ ಭೇಟಿಯ ನಂತರ ಮಾನವಿ ತಾಲೂಕಿಗೆ ತೆರಳಿ ಬೆಳಗ್ಗೆ 11 ಗಂಟೆ ಮಾನವಿ ವಿಧಾನ ಸಭಾ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಭೇಟಿ ನೀಡುವರು.

ಮಧ್ಯಾಹ್ನ 1.30ಕ್ಕೆ ರಾಯಚೂರ ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗುವರು. ಸಂಜೆ 5 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಸಿರವಾರ ತಾಲೂಕಿನ ಕವಿತಾಳಗೆ ತೆರಳಿ ಅಲ್ಲಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು.

ರಾತ್ರಿ 8 ಗಂಟೆಗೆ ಕವಿತಾಳದಿಂದ ನಿರ್ಗಮಿಸಿ ರಾಯಚೂರ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.

ಅಕ್ಟೋಬರ್ 4ರಂದು ಬೆಳಗ್ಗೆ 10 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಮಾನವಿ ತಾಲೂಕಿನ ಕರೆಗುಡ್ಡ ಗ್ರಾಮಕ್ಕೆ ತೆರಳಿ ಅಲ್ಲಿನ ಮಠಕ್ಕೆ ಭೇಟಿ ನೀಡುವರು.

ಮಧ್ಯಾಹ್ನ 12 ಗಂಟೆಗೆ ಕರೆಗುಡ್ಡದಿಂದ ನಿರ್ಗಮಿಸಿ ಮಾನವಿಗೆ ತೆರಳಿ ಅಲ್ಲಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು. ಸಂಜೆ 4 ಗಂಟೆಗೆ ಮಾನವಿಯಿಂದ ನಿರ್ಗಮಿಸಿ ರಾಯಚೂರಗೆ ಆಗಮಿಸಿ ವಾಸ್ತವ್ಯ ಮಾಡುವರು.

ಅಕ್ಟೋಬರ್ 5ರಂದು ರಾಯಚೂರಿನಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ರಾತ್ರಿ 9.40ಕ್ಕೆ ರೈಲು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande