ಧಾರವಾಡ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಧಾರವಾಡದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾಲ್ಗೊಂಡು ಗಾಂಧಿ ಹಾಗೂ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಮಹಾಪೌರರಾದ ಶ್ರೀಮತಿ ಜ್ಯೋತಿ, ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa