ಧಾರ್ಮಿಕ ಕಾರ್ಯಕ್ರಮಗಳಿಂದ ನಾಡಿನ ಸಂಸ್ಕೃತಿ ಉಳಿದಿದೆ
ರಾಯಚೂರು, 02 ಅಕ್ಟೋಬರ್(ಹಿ.ಸ.) : ಆ್ಯಂಕರ್ : ರಾಯಚೂರು ನಗರದ ಡ್ಯಾಡಿ ಕಾಲೋನಿಯಲ್ಲಿರುವ ಶ್ರೀ ಈಶ್ವರ ದೇವಸ್ಥಾನದಲ್ಲಿ ನವರಾತ್ರಿ ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶ್ರೀದೇವಿ ಆರಾಧನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಭಾ
ಧಾರ್ಮಿಕ ಕಾರ್ಯಕ್ರಮಗಳಿಂದ ನಾಡಿನ ಸಂಸ್ಕೃತಿ ಉಳಿದಿದೆ


ಧಾರ್ಮಿಕ ಕಾರ್ಯಕ್ರಮಗಳಿಂದ ನಾಡಿನ ಸಂಸ್ಕೃತಿ ಉಳಿದಿದೆ


ರಾಯಚೂರು, 02 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ರಾಯಚೂರು ನಗರದ ಡ್ಯಾಡಿ ಕಾಲೋನಿಯಲ್ಲಿರುವ ಶ್ರೀ ಈಶ್ವರ ದೇವಸ್ಥಾನದಲ್ಲಿ ನವರಾತ್ರಿ ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶ್ರೀದೇವಿ ಆರಾಧನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಭಾಗವಹಿಸಿ ಶ್ರೀ ಈಶ್ವರ ದೇವರ ಆಶೀರ್ವಾದ ಪಡೆದರು.

ಮಠಮಾನ್ಯಗಳಲ್ಲಿ ನಡೆಯುವ ಧಾರ್ಮಿಕ ಕೇಂದ್ರಗಳಿಂದ ಆಯೋಜಿಸುವ ಕಾರ್ಯಕ್ರಮಗಳ ಮೂಲಕ ನಾಡು ನುಡಿಯ ಸಂಸ್ಕೃತಿ ಉಳಿದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೀರಶೈವ ಮಹಾಸಭಾದ ಅಧ್ಯಕ್ಷರಾದ ಚಂದ್ರಶೇಖರ ಮಿರ್ಜಾಪೂರ್, ಹಿರಿಯರಾದ ರುದ್ರಪ್ಪ ಅಂಗಡಿ, ನರಸಿಂಹಲು ಮಾಡಿಗಿರಿ, ಸತೀಶ್ ಬಸವರಾಜ ಪಾಟೀಲ್ ಅತನೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande