ಮೈಸೂರು, 2 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ವಿಶ್ವವಿಖ್ಯಾತ ಮೈಸೂರು ಜಂಬೂ ಸವಾರಿಗೆ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದು, ಅಂಬಾರಿ ಮೆರವಣಿಗೆ ಅಧಿಕೃತವಾಗಿ ಆರಂಭವಾಗಿದೆ.
ಅರಮನೆ ಆವರಣದಿಂದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆ ರಾಜ ಗಾಂಭೀರ್ಯ ನಡಿಗೆ ಮೂಲಕ ಕೆ. ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ. ಮೀ. ದೂರ ಸಾಗಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa