ಬನ್ನಿ ಮರಕ್ಕೆ ರಾಜ ವಂಶಸ್ಥ ಯದುವೀರ್ ಪೂಜೆ
ಮೈಸೂರು, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮೈಸೂರಿನಲ್ಲಿ ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ರಾಜ ವಶಂಸ್ಥ ಯದುವೀರ್ ಒಡೆಯರ್‌ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ವಜ್ರಮುಷ್ಠಿ ಕಾಳಗ ಮುಕ್ತಾಯವಾದ ನಂತರ ಭುವನೇಶ್ವರಿ ದ
Pooja


ಮೈಸೂರು, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮೈಸೂರಿನಲ್ಲಿ ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ರಾಜ ವಶಂಸ್ಥ ಯದುವೀರ್ ಒಡೆಯರ್‌ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು.

ವಜ್ರಮುಷ್ಠಿ ಕಾಳಗ ಮುಕ್ತಾಯವಾದ ನಂತರ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಯಿತು. ಬಳಿಕ ಯದುವೀರ್ ಒಡೆಯರ್‌, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಮುಕ್ತಾಯವಾಗುತ್ತಿದ್ದಂತೆ ಯದುವೀರ್ ಅರಮನೆಗೆ ತೆರಳಿದರು. ಇದರೊಂದಿಗೆ ಅರಮನೆ ದಸರಾ ಮುಕ್ತಾಯಗೊಂಡಿದೆ.

ಪೊಲೀಸ್‌ ಬ್ಯಾಂಡ್‌ ಜೊತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande