ಕೋಲಾರ, 0೨ ಆಕ್ಟೋಬರ್ (ಹಿ.ಸ) :
ಆ್ಯಂಕರ್ : ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ಗಾಂಧೀಜಿಯವರು ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಪ್ರತಿಪಾದಿಸಿದ ತತ್ವ ಸಿದ್ದಾಂತಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಆ ತತ್ವ ಸಿದ್ದಾಂತಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ ಈ ಸಿದ್ದಾಂತಗಳನ್ನು ಅನುಸರಿಸಿದರೆ ಮಾತ್ರವೇ ದೇಶ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಅಹಿಂಸೆಯೇ ಗಾಂಧಿಜೀಯವರ ಅಸ್ತ್ರವಾಗಿತ್ತು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸಲು ಅವರ ಜನ್ಮದಿನವಾದ ಅಕ್ಟೋಬರ್ ೨ ಅನ್ನು ರಾಷ್ಟ್ರೀಯ ರಜಾ ದಿನವೆಂದು ಗುರುತಿಸಲಾಗಿದೆ. ವಿಶ್ವಸಂಸ್ಥೆಯು ಗಾಂಧಿ ಜಯಂತಿಯನ್ನು ಅಂತರಾಷ್ಟ್ರೀಯ ಅಹಿಂಸಾ ದಿನ ಎಂದು ಆಚರಿಸಿ ಮಹಾತ್ಮ ಗಾಂಧಿಗೆ ತಮ್ಮ ಗೌರವ ನಮನಗಳನ್ನು ಸಲ್ಲಿಸುತ್ತದೆ ಎಂದರು
ನಗರ ಬ್ಲಾಕ್ ಅಧ್ಯಕ್ಷ ಅಪ್ಸರ್ ಮಾತನಾಡಿ ಕಾಂಗ್ರೆಸ್ ಕಛೇರಿಯಲ್ಲಿ ಪಕ್ಷದ ಎಲ್ಲಾ ಘಟಕಗಳಿಂದ ಕಾರ್ಯಕ್ರಮ ಮಾಡೋಣ ಪಕ್ಷವು ಅವಕಾಶ ಕೊಟ್ಟಿದೆ ಸಂಘಟನೆಗೆ ಎಲ್ಲರ ಜೊತೆಗೆ ಗುಂಪುಗಾರಿಕೆ ಇಲ್ಲದೆ ಕೆಲಸ ಮಾಡೋಣ ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಮುಖಂಡರ ವಿಶ್ವಾಸ ತೆಗೆದುಕೊಂಡು ಹೋಗತ್ತೇವೆ ಬೂತ್ ಮತ್ತು ಗ್ರಾಮದಲ್ಲಿ ಮಟ್ಟದಲ್ಲಿ ಸಂಘಟನೆಗೆ ಒತ್ತು ನೀಡಲಾಗುತ್ತದೆ ಎಂದರು
ನೂತನವಾಗಿ ನೇಮಕಗೊಂಡ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ಪ್ರಸಾದ್ ಬಾಬು, ಅಂಬರೀಷ್, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಜಯದೇವ್, ಎಸ್ಟಿ ಘಟಕದ ನಾಗರಾಜ್ ಮುಖಂಡರಾದ ಒಬಿಸಿ ಮಂಜುನಾಥ್, ವೆಂಕಟಪತಿಯಪ್ಪ, ವೀರೇಂದ್ರ ಪಾಟೀಲ್, ಯಲವಾರ ರಾಜಕುಮಾರ್, ಜಗನ್ ಜಗದೀಶ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ಕುಮಾರ್, ಜಾಲಿಬಾನು, ಹರೀಷ್, ಮುಂತಾದವರು ಇದ್ದರು.
ಚಿತ್ರ : ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್