ನಾನಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯು ಕ್ರೀಡಾ ಸಾಧನೆಗೆ ಸಂಬಂಧಪಟ್ಟಂತೆ ನಾನಾ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜುನ ಪ್ರಶಸ್ತಿ, ರಾಷ್ಟ್ರೀಯ ಕ
ನಾನಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ


ಚಿತ್ರದುರ್ಗ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯು ಕ್ರೀಡಾ ಸಾಧನೆಗೆ ಸಂಬಂಧಪಟ್ಟಂತೆ ನಾನಾ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜುನ ಪ್ರಶಸ್ತಿ, ರಾಷ್ಟ್ರೀಯ ಕ್ರೀಡಾ ಪೋಷಕ ಪ್ರಶಸ್ತಿ, ದ್ರೋಣಚಾರ್ಯ ಪ್ರಶಸ್ತಿ, ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅಕ್ಟೋಬರ್ 28 ರೊಳಗಾಗಿ ಸಲ್ಲಿಸಬೇಕು. ಅರ್ಜಿದಾರರು ವೆಬ್ ಸೈಟ್ www.dbtyas.sports.gov ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 011-23387432, 1800-202-5155, 1800-258-5155 ಸಂಪರ್ಕಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande