ವಿಜಯಪುರ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ, ಬಹು ವಾರ್ಷಿಕ ಬೆಳೆಗಳಿಗೆ 2ಲಕ್ಷ ಪರಿಹಾರವನ್ನು ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅಗ್ರಹ ಮಾಡಿದರು.
ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ ಬೆಳೆಗಳು ಹಾಳಾಗಿವೆ ದ್ರಾಕ್ಷಿ ದಾಳಿಂಬ್ರಿ ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳಲ್ಲಿ ನೀರು ನಿಂತು ಹಾಳಾಗಿವೆ. ಆದ್ದರಿಂದ ಯಾವುದೇ ಜಂಟಿ ಸಮೀಕ್ಷೆ ವೈಮಾನಿಕ ಸಮೀಕ್ಷೆ ಎಂದು ನೆಪ ಹೇಳದೆ 15 ದಿನದ ಒಳಗಾಗಿ ಜಿಲ್ಲೆಯ ಎಲ್ಲರಿಗೂ ಪರಿಹಾರ ಬರಲೇಬೇಕೆಂದು ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande