ಕೋಮು ಸೌಹಾರ್ದತೆ ಇದ್ದರೆ ಬೆಳವಣಿಗೆ ಸಾಧ್ಯ : ಸಿದ್ದರಾಮಯ್ಯ
ಮಂಗಳೂರು, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪುತ್ತೂರಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್
Cm


ಮಂಗಳೂರು, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪುತ್ತೂರಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದರು.

ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಯಾವುದೇ ಸಂಘಟನೆ ಸಾರ್ವಜನಿಕ ಅಥವಾ ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ಹಮ್ಮಿಕೊಂಡರೆ ನಿಷೇಧ ಮಾಡಬೇಕೆಂದು ಆದೇಶ ಹೊರಡಿಸಿದ್ದರು. ನಾವೂ ಅದನ್ನೇ ಮಾಡಿದ್ದೇವೆ. ಅದಕ್ಕೆ ಆರ್ ಎಸ್ ಎಸ್ ಬಲಿ ಹಾಕಲು ಹೊರಟಿದ್ದಾರೆ ಎಂದು ಟೀಕಿಸುತ್ತಾರೆ. ನಾವು ಮಾಡಿದರೆ ಜಾತಿ ಬಣ್ಣ ಕಟ್ಟುತ್ತಾರೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಇಂಥ ಸೂಕ್ಷ್ಮ ವಿಚಾರಗಳ ಕುರಿತು ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಹೆಚ್.ಕೆ ಪಾಟೀಲ್ ಅವರು ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande