ಉಡುಪಿ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ
ಉಡುಪಿ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಧಾರ್ಮಿಕ ವಿಧಿಗಳು ಪ್ರಾರಂಭವಾಗಿವೆ. ಹಬ್ಬದ ನಿಮಿತ್ತ ಇಂದು ಮಠದಲ್ಲಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರ ನೆರವೇರಿಸಲಾಯಿತು. ಜಲಪೂರಣ ಶಾಸ್ತ್ರದ ನಿಮಿತ್ತ ಮಠದ ಪುರೋಹಿತರು ಕಲಶಪೂಜೆ ಮಾಡಿದರು. ಪರ್ಯ
Diwali


ಉಡುಪಿ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಧಾರ್ಮಿಕ ವಿಧಿಗಳು ಪ್ರಾರಂಭವಾಗಿವೆ. ಹಬ್ಬದ ನಿಮಿತ್ತ ಇಂದು ಮಠದಲ್ಲಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರ ನೆರವೇರಿಸಲಾಯಿತು.

ಜಲಪೂರಣ ಶಾಸ್ತ್ರದ ನಿಮಿತ್ತ ಮಠದ ಪುರೋಹಿತರು ಕಲಶಪೂಜೆ ಮಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಜಲಪೂರಣ ಮಾಡಲಾಯಿತು. ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಪುತ್ತಿಗೆ ಉಭಯ ಶ್ರೀಪಾದರು ಗಂಧೋಪಚಾರದೊಂದಿಗೆ ಎಣ್ಣೆ ಶಾಸ್ತ್ರ ನೆರವೇರಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande