ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
ಬೆಂಗಳೂರು, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 27 ರಿಂದ 13 ದಿನಗಳ ಕಾಲ ನಿರುದೋಗಿ ಪುರುಷ ಮತ್ತು ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕ
ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ


ಬೆಂಗಳೂರು, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 27 ರಿಂದ 13 ದಿನಗಳ ಕಾಲ ನಿರುದೋಗಿ ಪುರುಷ ಮತ್ತು ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 45 ವರ್ಷ ವಯಸ್ಸಿನ ಪುರುಷ ಹಾಗೂ ಮಹಿಳೆಯರು ಅಕ್ಟೋಬರ್ 27 ರಂದು ಬೆಳಿಗ್ಗೆ 09 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8970476050, 9686248369, 9591514754 ಗಳಿಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande