ಚಿತ್ರದುರ್ಗ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ನಿಯಮಗಳ ಅನುಸಾರ ಸಹಾಕಾರ ಸಂಘ ಮತ್ತು ಸೌಹಾರ್ದ ಸಹಾಕಾರಿ ಸಂಘಗಳು ಪ್ರತಿವರ್ಷ ವಾರ್ಷಿಕ ಮಹಾಸಭೆ ನಡೆಸಿ, ಲೆಕ್ಕಪರಿಶೋಧನ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಆದರೆ ಚಿತ್ರದುರ್ಗ ಜಿಲ್ಲೆಯ ಬಹುಪಾಲು ಸಂಘಗಳು ಲೆಕ್ಕಪರಿಶೋಧನಾ ಫರ್ಮಿನ ನೇಮಕಾತಿ ಬಗ್ಗೆ ಮಾಹಿತಿ ನೀಡಿರುವುದಿಲ್ಲ.
2025-26ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಆಯ್ಕೆ ಪತ್ರಗಳನ್ನು ಸಲ್ಲಿಸುವಾಗ ವಾರ್ಷಿಕ ಮಹಾಸಭೆಯ ನಡವಳಿಗಳ ಧೃಡೀಕೃತ ನಕಲು ಪ್ರತಿಯನ್ನು ಮುಖಪತ್ರದೊಂದಿಗೆ ಕೂಡಲೇ ಚಿತ್ರದುರ್ಗದ ಜೆ.ಸಿ.ಆರ್ ಬಡಾವಣೆಯಲ್ಲಿನ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಕಚೇರಿ ಸಲ್ಲಿಸಬೇಕು. ಇಲ್ಲವಾದಲ್ಲಿ ಇಲಾಖೆಯಿಂದ ಸದರಿ ಸಂಘಗಳಿಗೆ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa